if unable to read kannada words please install this kannada nudi software : click here

If unable to read kannada words please install this kannada nudi software : click here

ಕವಿಚರಿತೆ


Click here to download this file
ಕವಿಚರಿತೆ

ಪಂಪ
ಪಂಪ (ಕ್ರಿ.ಶ. ೯೦೨-೯೫೦) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. "ಆದಿಪುರಾಣ ಮತ್ತು ವಿಕ್ರಮಾರ್ಜುನ ವಿಜಯ" ಎಂಬ ಎರಡು ಕೃತಿಗಳ ಕರ್ತೃ. ಗದ್ಯ ಮತ್ತು ಪದ್ಯ ಸೇರಿದ ಚಂಪೂಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ. ಆದಿಕವಿ ಎಂದು ಹೆಸರು ಪಡೆದ ಪಂಪನು ಕನ್ನಡದ ರತ್ನತ್ರಯರಲ್ಲಿ ಒಬ್ಬನಾಗಿದ್ದನು. ಪಂಪನನ್ನು ಯುಗ ಪ್ರವರ್ತಕನೆಂದು ಕನ್ನಡಿಗರು ಗೌರವಿಸಿ ಅವನ ಕಾಲವನ್ನು ಪಂಪಯುಗವೆಂದು ಕರೆದಿದ್ದಾರೆ.
ಹಿನ್ನೆಲೆ:
·         ಪಂಪನು ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಜನಿಸಿದನು. ಇವನ ತಂದೆ ಭೀಮಪ್ಪಯ್ಯ ಮತ್ತು ತಾಯಿ ಅಬ್ಬಲಬ್ಬೆ. ಕ್ರಿ.ಶ.ಸುಮಾರು ೯೩೫ ರಿಂದ ೯೫೫ರ ವರೆಗೆ ಆಳಿದ ವೇಮುಲವಾಡ ಚಾಲುಕ್ಯ ವಂಶದ ಅರಸು ಇಮ್ಮಡಿ ಅರಿಕೇಸರಿಯ ಆಶ್ರಯದಲ್ಲಿದ್ದ.
·         ಪಂಪನ ಪೂರ್ವಜರು ವೆಂಗಿ ಮಂಡಲದವರು. ವೆಂಗಿಮಂಡಲವು ಕೃಷ್ಣಾ ಮತ್ತು ಗೋದಾವರೀ ನದಿಗಳ ನಡುವೆ ಇದ್ದ ಪ್ರದೇಶ. ಇದರಲ್ಲಿದ್ದ ಏಳು ಗ್ರಾಮಗಳಲ್ಲಿ ವೆಂಗಿಪಳು ಎಂಬುದು ಪ್ರಸಿದ್ಧ ಅಗ್ರಹಾರ. ಅಲ್ಲಿದ್ದ ಜಮದಗ್ನಿ ಪಂಚಾರ್ಷೇಯ ಪ್ರವರದ ಶ್ರೀವತ್ಸ ಗೋತ್ರಕ್ಕೆ ಸೇರಿದ ಕುಟುಂಬಕ್ಕೆ ಸೇರಿದವನು ಪಂಪ.
·         ಮಾಧವ ಸೋಮಯಾಜಿ ಎಂಬಾತನನ್ನು ಪಂಪನ ಮನೆತನದ ಹಿರಿಯನೆಂದು ಗುರುತಿಸಲಾಗಿದೆ. ಈತ ಪಂಪನ ಮುತ್ತಜ್ಜನ ತಂದೆ. ಮಾಧವ ಸೋಮಯಾಜಿಯ ಮಗ ಅಭಿಮಾನ ಚಂದ್ರ. ಈತ ಈಗಿನ [[ಗುಂಟೂರು ಸಮೀಪದ ಗುಂಡಿಕಱಕ್ಕೆ ಸೇರಿದ ನಿಡುಗುಂದಿ ಎಂಬ ಅಗ್ರಹಾರದಲ್ಲಿದ್ದ. ಈತ ಪಂಪನ ಮುತ್ತಜ್ಜ.
·         ಅಭಿಮಾನ ಚಂದ್ರನ ಮಗ ಕೊಮರಯ್ಯ. ಈತನ ಕಾಲದಲ್ಲಿ ಈ ಕುಟುಂಬದವರು ಬನವಾಸಿ, ಅಂದರೆ ಕರ್ನಾಟಕದ ಉತ್ತರ ಕನ್ನಡ/ಧಾರವಾಡ ಪ್ರದೇಶಕ್ಕೆ ವಲಸೆ ಬಂದರು. ಕೊಮರಯ್ಯ ಪಂಪನ ಅಜ್ಜ. ಇವನ ಮಗ ಭೀಮಪಯ್ಯ. ಭೀಮಪಯ್ಯನ ಹೆಂಡತಿ ಅಣ್ಣಿಗೇರಿಯ ಜೋಯಿಸ ಸಿಂಘನ ಮೊಮ್ಮಗಳು. ಪಂಪ ಇವರ ಮಗ. ಜಿನವಲ್ಲಭ ಪಂಪನ ತಮ್ಮ.
·         ಪಂಪನ ತಂದೆ ಭೀಮಪ್ಪಯ್ಯ ಯಜ್ಞಯಾಗಾದಿಗಳಲ್ಲಿನ ಹಿಂಸೆಯನ್ನು ವಿರೋಧಿಸಿದ ಜೈನ ಮತವನ್ನು ಸ್ವೀಕರಿಸಿದನು. ದೇವೇಂದ್ರಮುನಿ ಎಂಬಾತ ಪಂಪನ ಗುರು.





ಜೀವನ:
·         ಪಂಪನು ದೇಶೀ ಮತ್ತು ಮಾರ್ಗ ಇವುಗಳನ್ನು ಸೇರಿಸಿಕೊಂಡು ಕೃತಿಯನ್ನು ರಚಿಸಿದನು. ಸಂಸ್ಕೃತ ಸಾಹಿತ್ಯದಂತಿರುವುದು ಮಾರ್ಗ’, ಅಚ್ಚಕನ್ನಡದ ಶೈಲಿಯು ದೇಶೀಎನಿಸಿತ್ತು. ತನ್ನ ಕೃತಿಗಳ ರಚನೆಯ ಕಾಲಕ್ಕೆ ಪಂಪ ಅರಿಕೇಸರಿಯ ಆಶ್ರಯದಲ್ಲಿದ್ದ. ಪಂಪ ಅರಿಕೇಸರಿಯ ಯೋಧನಾಗಿ ಅಥವ ದಂಡನಾಯಕನಾಗಿದ್ದ ಎಂಬ ಮಾತು ಇದೆ. ಖಡ್ಗವನ್ನು ಹಿಡಿದು ಪರಾಕ್ರಮಿಯಾಗಿ ಯುದ್ಧ ಮಾಡಬಲ್ಲ ಪಂಪನು ಕನ್ನಡ ಭಾಷೆಯಲ್ಲಿ ಅತ್ಯಂತ ಹಿಡಿತ ಉಳ್ಳವನು, ಪ್ರೀತಿಯಿದ್ದವನು. ತನ್ನ ದೇಶಪ್ರೇಮವನ್ನು, “ಆರಂಕುಶವಿಟ್ಟೊಡಂ ನೆನವುದೆನ್ನ ಮನಂ ಬನವಾಸಿ ದೇಶಮಂಎಂದು ಹೇಳಿಕೊಳ್ಳತ್ತ ಪಂಪ ತನ್ನ ತಾಯ್ನಾಡನ್ನು ಹೊಗಳಿದ್ದಾನೆ.
·         ಪಂಪನು ಪುಲಿಗೆರೆಯ 'ತಿರುಳ್ ಗನ್ನಡ'ದಲ್ಲಿ ಕಾವ್ಯ ರಚಿಸಿದ್ದೇನೆ ಎಂದಿದ್ದಾನೆ. ಪಂಪನು ಆದಿಪುರಾಣವನ್ನು ಕ್ರಿ.ಶ. ೯೪೧-೪೨ರಲ್ಲಿ ರಚಿಸಿದ. ಇದು ಗುಣಸೇನಾಚಾರ್ಯನ ಪೂರ್ವಪುರಾಣದಲ್ಲಿ ಬಂದಿರುವ ಪ್ರಥಮ ಜೈನ ತೀರ್ಥಂಕರ ವೃಷಭನಾಥನ ಕಥೆಯನ್ನು ಹೇಳುತ್ತದೆ. ಪಂಪನು ಆದಿಪುರಾಣವನ್ನು ಮೂರು ತಿಂಗಳಿನಲ್ಲಿ ರಚಿಸಿರುವೆನೆಂದು ಹೇಳಿಕೊಂಡಿದ್ದಾನೆ.
·         ಪಂಪನ ಇನ್ನೊಂದು ಕೃತಿ 'ವಿಕ್ರಮಾರ್ಜುನ ವಿಜಯ'ವು ಮಹಾಭಾರತದ ಕಥೆಯನ್ನು ನಿರೂಪಿಸುತ್ತದೆ. ವ್ಯಾಸರ ಮಹಾಭಾರತ ಕತೆಯನ್ನು ಪ್ರಾದೇಶಿಕ ಭಾಷೆಯಲ್ಲಿ, ದೇಶೀಯ ಗುಣಗಳನ್ನು ಮೇಳವಿಸಿ ಬರೆದ ಮೊದಲ ಕೃತಿ. ವ್ಯಾಸ ಮುನೀಂದ್ರರುಂದ್ರ ವಚನಾಮೃತವಾರ್ದಿಯನೀಸುವೆಂ ಕವಿ ವ್ಯಾಸನೆಂಬ ಗರ್ವಮೆನಗಿಲ್ಲ ಎಂದು ವಿನಯದಿಂದ ನುಡಿದಿದ್ದಾನೆ. ತನಗೆ ಆಶ್ರಯ ನೀಡಿದ್ದ ಅರಿಕೇಸರಿಯನ್ನು ಅರ್ಜುನನಿಗೆ ಹೋಲಿಸಿ, ಅವನನ್ನೇ ಕಥಾನಾಯಕನನ್ನಾಗಿ ಮಾಡಿಕೊಂಡಿದ್ದಾನೆ. ಪಂಪನು ವಿಕ್ರಮಾರ್ಜುನ ವಿಜಯವನ್ನು ಆರು ತಿಂಗಳಿನಲ್ಲಿ ಬರೆದನಂತೆ. ಇದು ೧೪ ಆಶ್ವಾಸಗಳನ್ನು, ೧೬೦೯ ಪದ್ಯಗಳನ್ನು ಒಳಗೊಂಡಿದೆ.
·         ಪಂಪ ತನ್ನ ಕೃತಿಗಳಲ್ಲಿ ಹೇಳಿಕೊಂಡಿರುವ ವಿಚಾರಗಳಿಂದ ಮತ್ತು ಅವನ ತಮ್ಮ ಕುರ್ಕ್ಕ್ಯಾಲ್ ಎಂಬ ಗ್ರಾಮದಲ್ಲಿ ನೆಡಿಸಿದ ಶಾಸನದಿಂದ ಈ ವಿವರಗಳು ತಿಳಿದು ಬಂದಿವೆ.
·         ಪಂಪನನ್ನು "ಪಸರಿಪ ಕನ್ನಡಕ್ಕೊಡೆಯನೊರ್ವನೆ ಸತ್ಕವಿ ಪಂಪನಾವಗಂ" ಎಂದು ಪುಣ್ಯಾಸ್ರವದ ಕವಿ ನಾಗರಾಜನೆಂಬುವನ ನುಡಿ ಕನ್ನಡ ಕವಿಗಳು ಪಂಪನಿಗೆ ಸಲ್ಲಿಸಿರುವ ಕಾವ್ಯ ಗೌರವದ ಪ್ರಾತಿನಿಧಿಕ ವಾಣಿಯಾಗಿದೆ. ಅಲ್ಲದೆ ಮುಂದುವರೆದು ಏಂ ಕಲಿಯೋ, ಸತ್ಕವಿಯೋ? ಕವಿತಾಗುಣಾರ್ಣಭವಂಎಂದು ಕೂಡ ಪಂಪನನ್ನು ಹೊಗಳಿದ್ದಾರೆ.
·         ಪಂಪ ಬರೆದ ಎರಡು ಕೃತಿಗಳು ಹಳಗನ್ನಡದ ಕಾವ್ಯ ರಚನೆಯ ಮೇಲೆ ಅತಿ ಹೆಚ್ಚಿನ ಪ್ರಭಾವವನ್ನು ಬೀರಿದವು. ಪುರಾಣ ಮತ್ತು ಇತಿಹಾಸಗಳನ್ನು ಕಾವ್ಯಕ್ಕೆ ಅಳವಡಿಸಿಕೊಳ್ಳುವ ಮಾದರಿಯೊಂದನ್ನು ನಿರ್ಮಿಸಿದವು. 'ಹಿತಮಿತ ಮೃದುವಚನ' ಎಂದು ಪಂಪ ತನ್ನ ಭಾಷೆಯ ಬಗ್ಗೆ ಹೇಳಿಕೊಂಡಿದ್ದಾನೆ. ಈ ಶಾಸ್ತ್ರೀಯ ಕವಿ ತನ್ನ ಕೃತಿಗಳಲ್ಲಿ ಪರಿಶೀಲಿಸಿದ ಆಶಯಗಳು, ಬಳಸಿದ ರೂಪಕಗಳು ಆಧುನಿಕ ಕನ್ನಡ ಸಾಹಿತ್ಯದ ಕೃತಿಗಳ ಮೇಲೂ ಪರಿಣಾಮ ಬೀರಿವೆ.
·         ವಿಶೇಷವಾಗಿ ಕುವೆಂಪು ಅವರು ಪಂಪನ ಎರಡು ಕಾವ್ಯಗಳ ಆಶಯವನ್ನು ತಮ್ಮ ಕಾದಂಬರಿಗಳಲ್ಲಿ ಹೊಸಬಗೆಯಲ್ಲಿ ಅನ್ವೇಷಿಸಿರುವುದನ್ನು ಕಾಣಬಹುದು.

ಕೃತಿಗಳು:
·         ಆದಿಪುರಾಣ
ಸೊಗಯಿಸಿ ಬಂದ ಮಾಮರನೆ ತಳ್ತೆಲೆವಳ್ಳಿಯೆ ಪೂತ-ಜಾತಿ ಸಂ ಪಗೆಯೆ ಕುಕಿಲ್ವ ಕೋಗಿಲೆಯೆ ಪಾಡುವ ತುಂಬಿಯೆ ನಲ್ಲರೊಳ್ಮೊಗಂ| ನಗೆಮೊಗದೊಳ್ ಪಳಂಚಲೆಯೆ ಕೂಡುವ ನಲ್ಲರೆ ನೋೞ್ಪೊಡಾವ ಬೆ ಟ್ಟುಗಳೊಳಮಾವ ನಂದನವನಂಗಳೊಳಂ ಬನವಾಸಿ ದೇಶದೊಳ್||
[ಆ ಬನವಾಸಿ ದೇಶದ ಯಾವ ಬೆಟ್ಟದಲ್ಲಿ ನೋಡಿದರೂ ಹಣ್ಣಿನಿಂದ ತುಂಬಿ ಹೋಗಿರುವ ಮಾವಿನ ಮರಗಳು, ಚಿಗುರಿದ ಬಳ್ಳಿಗಳು, ಹೂ ಬಿಟ್ಟ ಜಾಜಿ ಸಂಪಿಗೆಯ ಗಿಡಮರಗಳು, ಕುಹೂ ಎನ್ನುವ ಕೋಗಿಲೆಗಳು, ಝೇಂಕರಿಸುವ ತುಂಬಿಗಳು, ಮುಖದಲ್ಲಿ ಮುಗುಳ್ನಗೆಯಿಂದ ಕೂಡಿ ಸಲ್ಲಾಪವಾಡುವ ಪ್ರೇಮಿಗಳು- ಈ ಸುಂದರ ದೃಶ್ಯವೇ ಕಾಣಿಸುತ್ತದೆ.]
ಚಾಗದ ಭೋಗದಕ್ಕರದ ಗೇಯದ ಗೊಟ್ಟಿಯಲಂಪಿನಿಂಪುಗ ಳ್ಗಾಗರವಾದ ಮಾನಸರೆ ಮಾನಸರಂತವರಾಗಿ ಪುಟ್ಟಲೇ| ನಾಗಿಯುಮೇನೊ ತೀರ್ದಪುದೆ ತೀರದೊಡಂ ಮರಿದುಂಬಿಯಾಗಿ ಮೇಣ್ ಕೋಗಿಲೆಯಾಗಿ ಪುಟ್ಟುವುದು ನಂದನದೊಳ್ ಬನವಾಸಿ ದೇಶದೊಳ್ ||
[ತ್ಯಾಗ, ಭೋಗ, ವಿದ್ಯೆ, ಸಂಗೀತ, ಕೂಟಗಳು - ಇವುಗಳಿಂದ ಕೂಡಿರುವ ಜೀವನವನ್ನು ಸಾಗಿಸುವವರೇ ನಿಜವಾದ ಮನುಷ್ಯರು. ಅಂತಹವರಾಗಿ ಹುಟ್ಟಬೇಕು. ಹಾಗಾಗದಿದ್ದರೆ ಬನವಾಸಿಯಲ್ಲಿ ಮರಿದುಂಬಿಯಾಗಿಯೋ ಅಥವಾ ಕೋಗಿಲೆಯಾಗಿಯೋ ಹುಟ್ಟಬೇಕು.]
ತೆಂಕಣ ಗಾಳಿ ಸೋಂಕಿದೊಡಮೊಳ್ನುಡಿಗೇಳ್ದೊಡಮಿಂಪನಾಳ್ದ ಗೇ ಯಂ ಕಿವಿವೊಕ್ಕೊಡಂ ಬಿರಿದ ಮಲ್ಲಿಗೆಗಂಡೊಡಮಾದ ಕೆಂದಲಂ| ಪಂಗೆಡೆಗೊಂಡೊಡಂ ಮಧುಮಹೋತ್ಸವಮಾದೊಡಮೇನನೆಂಬೆನಾ ರಂಕುಸವಿಟ್ಟೊಡಂ ನೆನೆವುದೆನ್ನ ಮನಂ ಬನವಾಸಿ ದೇಶಮಂ ||
[ದಕ್ಷಿಣದಿಂದ ತಂಪಾದ ಗಾಳಿ ಬೀಸಿದಾಗ, ಒಳ್ಳೆಯ ಮಾತು ಕಿವಿಗೆ ಬಿದ್ದಾಗ, ಇಂಪಾದ ಸಂಗೀತವನ್ನು ಕೇಳಿದಾಗ, ಅರಳುಮಲ್ಲಿಗೆಯನ್ನು ಕಂಡಾಗ, ಪ್ರೇಮಸುಖವನ್ನು ಅನುಭವಿಸಿದಾಗ, ವಸಂತೋತ್ಸವವಾದಾಗ- ಅಂದರೆ, ಎಲ್ಲ ಒಳ್ಳೆಯ ಸುಖಗಳಿಗೆಯಲ್ಲಿ- ಯಾರು ತಡೆದರೂ ನನ್ನ ಮನಸ್ಸು ಬನವಾಸಿ ದೇಶವನ್ನು ನೆನೆಸಿಕೊಳ್ಳುತ್ತದೆ. ಅಂದರೆ, ನನಗೆ ಯಾವುದೇ ಆಸೆ-ಆಮಿಷಗಳನ್ನು ತೋರಿದರೂ, ನನ್ನನ್ನು ಹಿಂಸಿಸಿದರೂ ಬನವಾಸಿಯನ್ನು ನಾನು ಮರೆಯಲಾರೆ ಎಂಬ ಆತ್ಮಾಭಿಮಾನ ಪಂಪನದು.]
                                                                       ************

Click here to download this file
ಪೊನ್ನ:
ಪೊನ್ನನು ಹಳೆಗನ್ನಡದ ಮೂವರು ರತ್ನತ್ರಯರಲ್ಲಿ ಒಬ್ಬನು. (ಇತರ ಇಬ್ಬರೆಂದರೆ ಪಂಪ ಹಾಗು ರನ್ನ). ಈತನ ಕಾಲ ಕ್ರಿ.ಶ.೯೫೦. ರಾಷ್ಟ್ರಕೂಟ ಚಕ್ರವರ್ತಿ ೩ನೆಯ ಕೃಷ್ಣನ ಆಸ್ಥಾನದಲ್ಲಿ(೯೩೯-೯೬೫) ಪೊನ್ನನು ಆಸ್ಥಾನ ಕವಿಯಾಗಿದ್ದನು. ಕನ್ನಡ ಹಾಗು ಸಂಸ್ಕೃತ ಗಳಲ್ಲಿ ಇವನಿಗೆ ಅಪಾರ ಪಾಂಡಿತ್ಯವಿದ್ದುದರಿಂದ ಈತನಿಗೆ ಉಭಯ ಕವಿಚಕ್ರವರ್ತಿಎಂದು ಕರೆಯಲಾಗುತ್ತಿತ್ತು. ಈತನು ತನ್ನನ್ನು ಕುರುಳ್ಗಳ ಸವಣಎಂದು ಕರೆದುಕೊಂಡಿದ್ದಾನೆ. ಆದುದರಿಂದ ಈತನು ಸನ್ಯಾಸಿಯಂತೆ ಇದ್ದನೆಂದು ಭಾವಿಸಬಹುದು.

ಕೃತಿಗಳು:
ಪೊನ್ನನು ೪ ಕಾವ್ಯಗಳನ್ನು ರಚಿಸಿದ್ದಾನೆಂದು ಹೇಳಲಾಗುತ್ತಿದೆ. ಲಭ್ಯವಿರುವ ಕಾವ್ಯಗಳು ಎರಡು:
·         ಶಾಂತಿಪುರಾಣ
·         ಜಿನಾಕ್ಷರಮಾಲೆ
ಭುವನೈಕ ರಾಮಾಭ್ಯುದಯಹಾಗು ಗತಪ್ರತ್ಯಾಗತಈ ಕಾವ್ಯಗಳು ಲಭ್ಯವಿಲ್ಲ.

೧.ಶಾಂತಿ ಪುರಾಣ -ಇದಕ್ಕೆ 'ಪುರಾಣ ನಾಮ ಚೂಡಾಮಣಿ'ಎಂಬ ಪರ್ಯಾಯನಾಮವಿದೆ.೧೨ ಆಶ್ವಾಸಗಳಲ್ಲಿ ರಚನೆಯಾಗಿರುವ ಈ ಚಂಪೂ ಕಾವ್ಯ ೧೬ನೆಯ ತೀರ್ಥಂಕರನಾದ ಶಾಂತಿನಾಥನನ್ನು ಕುರಿತದ್ದು.ಈ ಕಾವ್ಯದಲ್ಲಿ ಪೊನ್ನನ ವಿದ್ವತ್ತು,ಪ್ರೌಢಿಮೆ,ಭಾಷೆ,ಛಂದಸ್ಸುಗಳ ಮೇಲೆ ಇರುವ ಹಿಡಿತ ಎದ್ದು ಕಾಣುತ್ತದೆ.ತೀರ್ಥಂಕರನಾಗಲಿರುವವನು ೬ನೆಯ ಜನ್ಮದಲ್ಲಿ 'ಅಪರಾಜಿತ'ನಾಗಿ ಹುಟ್ಟಿದಂದಿನಿಂದ ಕಥೆ ಆರಂಭವಾಗಿ,ಕೊನೆಯ ೩(೧೦-೧೨) ಆಶ್ವಾಸಗಳಲ್ಲಿ ಶಾಂತಿನಾಥನ ಸ್ವಂತ ಜೀವನವೂ,ಸಿದ್ಧಿಯೂ ವರ್ಣಿಸಲ್ಪಟ್ಟಿದೆ.ಜೈನಧರ್ಮದ ತತ್ವಗಳನ್ನು ಕವಿ ಕಾವ್ಯದುದ್ದಕ್ಕೂ ಪ್ರತಿಪಾದಿಸಿದ್ದಾನೆ.

೨.ಜಿನಾಕ್ಷರಮಾಲೆ-೩೯ ಕಂದಪದ್ಯಗಳಿರುವ ಕೃತಿ.''ಕಾರದಿಂದ ಹಿಡಿದು ''ಕಾರದವರೆಗೂ ಕ್ರಮವಾಗಿ ಒಂದೊಂದು ಪದ್ಯಾಕ್ಷರ ಆರಂಭವಾಗುತ್ತದೆ.
೩.ಭುವನೈಕ ರಾಮಾಭ್ಯುದಯ-ಇದು ೧೪ ಆಶ್ವಾಸಗಳ ಚಂಪೂ ಕಾವ್ಯ.ಈ ಗ್ರಂಥವು ಲಭ್ಯವಿಲ್ಲವಾದ್ದರಿಂದ ಇದರ ಕಥಾವಸ್ತು ಚಕ್ರವರ್ತಿ ಕೃಷ್ನನ ಸಾಮಂತರಾಜ ಶಂಕರಗಂಡನ ಕುರಿತುದೊ,ಅಥವಾ ರಾಮಕಥೆಯನ್ನು ಕುರಿತುದೊ,ಇಲ್ಲವೇ ತನ್ನನ್ನು 'ಕೋದಂಡರಾಮ'ನೆಂದು ಕರೆದುಕೊಳ್ಳುತ್ತಿದ್ದ ಚೋಳರಾಜ ರಾಜಾದಿತ್ಯನ ಮೇಲೆ ಮುಮ್ಮಡಿಕೃಷ್ನ ತಕ್ಕೋಲದಲ್ಲಿ ವಿಜಯ ಸಾಧಿಸಿದ ಕಥೆಯೋ ಎಂಬುದು ಸ್ಪಷ್ಟವಾಗಿ ತಿಳಿದಿಲ್ಲ.ಮಲ್ಲಪನ ಮಗಳಾದ 'ದಾನಚಿಂತಾಮಣಿ'ಅತ್ತಿಮಬ್ಬೆಯು ಈ ಕೃತಿಯ ಸಾವಿರಪ್ರತಿಗಳನ್ನು ಮಾಡಿಸಿ,ಧರ್ಮಶ್ರದ್ಧೆಯುಳ್ಳವರಿಗೆ ಹಂಚಿದಳಂತೆ.
                                                          ****************
Click here to download this file
ರನ್ನ
ರನ್ನನು ಕ್ರಿ.ಶ.೯೪೯ರಲ್ಲಿ ಮುದುವೊಳಲು (ಈಗಿನ ಮುಧೋಳ) ಗ್ರಾಮದಲ್ಲಿ ಜನಿಸಿದನು. ತಂದೆ ಜಿನವಲ್ಲಭ , ತಾಯಿ ಅಬ್ಬಲಬ್ಬೆ. ರನ್ನನು ಜೈನ ಮನೆತನದ ಬಳೆಗಾರ ಕುಲದವನು. ಚಾಲುಕ್ಯರ ಎರಡನೆಯ ತೈಲಪ ಚಕ್ರವರ್ತಿ ಆಹವಮಲ್ಲನ ಆಸ್ಥಾನಕವಿಯಾಗಿದ್ದು ಕವಿಚಕ್ರವರ್ತಿ ಎಂಬ ಬಿರುದನ್ನು ಪಡೆದಿದ್ದನು.ಆ ಕಾಲದ ಪ್ರಸಿದ್ಧ ಗುರು ಅಜಿತಸೇನಾಚಾರ್ಯರ ಬಳಿ ರನ್ನನ ವಿದ್ಯಾಭ್ಯಾಸ. ಈತನು ಐದು ಕೃತಿಗಳನ್ನು ರಚಿಸಿದ್ದು ಮೂರು ಕೃತಿಗಳು ಮಾತ್ರ ಲಭ್ಯವಿವೆ:

ಬಿರುದುಗಳು:
·         ಕವಿಚಕ್ರವರ್ತಿ
·         ಕವಿರತ್ನ
·         ಅಭಿನವ ಕವಿಚಕ್ರವರ್ತಿ
·         ಉಭಯಕವಿ ಮುಂತಾದವುಗಳು..

ಕೃತಿಗಳು:
* ಅಜಿತನಾಥ ಪುರಾಣ ತಿಲಕಮ್ - ೧೨ ಅಧ್ಯಾಯಗಳ ಪುಟ್ಟ ಕಾವ್ಯ.
·         ಚಕ್ರೇಶ್ವರ ಚರಿತ - ಲಭ್ಯವಿಲ್ಲ.
·         ಪರಶುರಾಮ ಚರಿತ - ಲಭ್ಯವಿಲ್ಲ.
·         ರನ್ನಕಂದ - ೧೨ ಕಂದಪದ್ಯಗಳ ಅರ್ಥಕೋಶ.






No comments: